ಮೈಸೂರು ದಸರಾ ಮಹೋತ್ಸವ ಕುರಿತು ಉನ್ನತ ಮಟ್ಟದ ಸಭೆ
ಬೆಂಗಳೂರು, ಜುಲೈ 10: ಮೈಸೂರು ದಸರಾ ಮಹೋತ್ಸವ–2026ರ ಸಿದ್ಧತೆಗಳ ಕುರಿತು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿದರು.
ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವದ ಸಿದ್ಧತೆ, ವಿವಿಧ ಇಲಾಖೆಗಳ ಸಮನ್ವಯ ಹಾಗೂ ಅಗತ್ಯ ಪೂರ್ವಸಿದ್ಧತಾ ಕ್ರಮಗಳ ಕುರಿತು ಚರ್ಚೆ ನಡೆಯಿತು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್, ಸಚಿವರಾದ ಕೆ.ಜೆ. ಜಾರ್ಜ್, ಮಾಜಿ ಸಚಿವರು ಹಾಗೂ ಹಿರಿಯ ನಾಯಕರಾದ ಡಾ. ಹೆಚ್.ಸಿ. ಮಹದೇವಪ್ಪ, ಜಿಲ್ಲೆಯ ಶಾಸಕರು, ಸಂಸದರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.