ಮಾವುತರು, ಕಾವಾಡಿಗಳೊಂದಿಗೆ ಉಪಹಾರ ಸೇವಿಸಿದ ಯತೀಂದ್ರ.!
ಮೈಸೂರು ಅರಮನೆಯಲ್ಲಿ ಮಾವುತರು, ಕಾವಾಡಿಗಳೊಂದಿಗೆ ಉಪಹಾರ ಸೇವಿಸಿದ ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿದ್ದ ಮಾವುತರು ಹಾಗೂ ಕಾವಾಡಿಗಳ ಉಪಹಾರ ಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ಆಗಮಿಸಿ, ಮಾವುತರು ಹಾಗೂ ಕಾವಾಡಿಗಳ ಕುಟುಂಬ ಸದಸ್ಯರೊಂದಿಗೆ ಕುಳಿತು ಬೆಳಗಿನ ಉಪಹಾರ ಸೇವಿಸಿದರು.

ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿದ್ದ ಸಚಿವರು ಸುಮಾರು 10.15ಕ್ಕೆ ಅರಮನೆಗೆ ಆಗಮಿಸಿದರು. ಶಾಸಕರಾದ ಜಿ.ಟಿ. ದೇವೇಗೌಡ, ಅನಿಲ್ ಚಿಕ್ಕಮಾದು ಸೇರಿದಂತೆ ಸ್ಥಳೀಯ ನಾಯಕರು ಸಚಿವರಿಗೆ ಸಾಥ್ ನೀಡಿದರು.
ತನ್ವೀರ್ ಸೇಠ್ ಆಕ್ರೋಶಕ್ಕೆ ಸಮರ್ಥನೆ.!
ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ ಕುರಿತು ಸ್ಪಷ್ಟನೆ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ, “ಮೈಸೂರಿನಲ್ಲಿ ನಮ್ಮದು ಹೊಸ ಮನೆ. ಮನೆಯಲ್ಲಿರುವ ವಸ್ತುಗಳು ಬಹಳ ಕಡೆ ಚೆಲ್ಲಾಪಿಲ್ಲಿಯಾಗಿದ್ದವು. ಮನೆಯಲ್ಲಿ ಅಮ್ಮ ಇರಲಿಲ್ಲ. ಯಾವುದೇ ಕೆಲಸಗಾರರೂ ಇರಲಿಲ್ಲ. ಹೀಗಾಗಿ ಕೆಲವೊಂದು ವ್ಯವಸ್ಥೆಗಳನ್ನು ಮಾಡಿಕೊಂಡು ಬರುವುದರಲ್ಲಿ ತಡವಾಯಿತು. ಉದ್ದೇಶಪೂರ್ವಕವಾಗಿ ನಾನು ತಡವಾಗಿ ಬಂದಿಲ್ಲ” ಎಂದು ಹೇಳಿದರು.

ಈ ಕುರಿತು ಸಚಿವ ತನ್ವೀರ್ ಸೇಠ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿರುವುದಾಗಿಯೂ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಮಾವುತರು ಹಾಗೂ ಕಾವಾಡಿಗಳ ಕುಟುಂಬಗಳೊಂದಿಗೆ ಆತ್ಮೀಯವಾಗಿ ಬೆರೆತ ಸಚಿವರು ಅವರೊಂದಿಗೆ ಕುಳಿತು ಉಪಹಾರ ಸೇವಿಸಿದ್ದು, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.